ಉಡುಪಿ: ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿ, ಮದುವೆಯಾಗಲು ಯತ್ನಿಸಿದ್ದಾನೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರವಾಗಿದೆ. ಈತ ಪಿಎ್ಐ ನಂಟು ಹೊಂದಿರುವ ಕಾರಣ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್ಐಎ ಮೂಲಕ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಾ ಪ್ರಮುಖ್ ಸುನೀಲ್ ಕೆ.ಆರ್.ಲ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಯುವತಿಯು 9 ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಇನ್ಸ್ಟಾಗ್ರಾಮ್ನಲ್ಲಿ ಪರಿಚಯಿಸಿಕೊಂಡು ಲವ್ ಜಿಹಾದ್ ಬಲೆಗೆ ಬೀಳಿಸಿಕೊಂಡು, ಆಶ್ಲೀಲ ಪೋಟೊಗಳನ್ನು ಚಿತ್ರಿಸಿ ಬೆದರಿಸಿದ್ದನು. ಆಗ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ನಿರಂತರವಾಗಿ ಆಕೆಯನ್ನು ಹಿಂಬಾಲಿಸಿ, 6 ವರ್ಷದ ಬಳಿಕ ಅಪಹರಿಸಿಕೊಂಡು ಹೋಗಿದ್ದಾನೆ. ಅಕ್ರಮ್ ಡ್ರಗ್ಸ್ ಜಾಲದಲ್ಲಿ ಸಕ್ರಿಯವಾಗಿರುವ ಗರುಡ ಗ್ಯಾಂಗಿನ ಸದಸ್ಯ ಎಂದು ಸಂತ್ರಸ್ತೆಯ ಪೋಷಕರು ತಿಳಿಸಿದ್ದಾರೆ. ಪೋಲಿಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಯುವತಿಯನ್ನು ಪೋಷಕರಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ವಿಭಾಗ ಪ್ರಚಾರ ಪ್ರಮುಖ್ ಪ್ರದಿಪ್ ಸರಿಪಲ್ಲ, ಜಿಲ್ಲಾ ಸಂಯೋಜಕ್ ಮನೋಜ್ ಮಲ್ಪೆ ಉಪಸ್ಥಿತರಿದ್ದರು.