ಜಿಲ್ಲೆ

ಪ್ರೀತಿ ವಿಶ್ವಾಸದಿಂದ ಬದುಕು ಸಾಗಿಸಿ

ಸಿರಗುಪ್ಪ: ದುಶ್ಚಟಗಳಿಗೆ ದಾಸರಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ಯೋಜನಾ ನಿರ್ದೇಶಕ ರೋಹಿತಾಕ್ಷ ಹೇಳಿದರು.

ನಗರದ ಹಳೇ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದಲ್ಲಿ ಶನಿವಾರ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮದ್ಯವ್ಯಸನಿಗಳನ್ನು ಕುಡಿತದಿಂದ ಮುಕ್ತಗೊಳಿಸಲು ಈವರೆಗೆ 1179 ಶಿಬಿರಗಳನ್ನು ನಡೆಸಲಾಗಿದೆ. ಮದ್ಯ ತ್ಯಜಿಸಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಾಯಕವಾಗಿದೆ. ಕುಟುಂಬದ ಜತೆಗೆ ಪ್ರೀತಿ ವಿಶ್ವಾಸದಿಂದ ಬದುಕು ಸಾಗಿಸಿ. ಯಾರಿಗೂ ಹೊರೆಯಾಗದಂತೆ ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಸೌಹಾರ್ದದಿಂದ ಜೀವಿಸಬೇಕೆಂದರು.