ಜಿಲ್ಲೆ

ಎಂ. ಯೋಗೇಂದ್ರ ಅವರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಅವಿನಾಶ್ ಜೈನಹಳ್ಳಿ

ಮೈಸೂರು: ಅಂತಾರಾಷ್ಟ್ರೀಯ ಅಥ್ಲೀಟ್, ಇಲ್ಲಿನ ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಎಂ. ಯೋಗೇಂದ್ರ ಅವರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಅವರು ಆಗಸ್ಟ್ 13ರಿಂದ 25ರವರೆಗೆ ಸ್ವೀಡನ್‌ನ ಗೋತನ್‌ಬರ್ಗ್‌ನಲ್ಲಿ ನಡೆಯಲಿರುವ 25ನೇ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅವರು ಚಾಂಪಿಯನ್‌ಷಿಪ್‌ನಲ್ಲಿ ಪುರುಷರ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ 2 ಕಿ.ಮೀ. ಸ್ಟೀಪಲ್ ಚೇಸ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಪುಣೆಯಲ್ಲಿ ನಡೆದ 44ನೇ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ 2 ಕಿ.ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅವರು ವಿಶ್ವಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದಿದ್ದಾರೆ. ಯೋಗೇಂದ್ರ ಈವರೆಗೆ 9 ಬಾರಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.