ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಶನಿವಾರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು. ಶಾಸಕ ಹಂಪನಗೌಡ ಬಾದರ್ಲಿ, ತಹಸೀಲ್ದಾರ್ ಅರುಣ್ ದೇಸಾಯಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ ಇದ್ದರು. 
ಜಿಲ್ಲೆ

ಮಾಚಿದೇವರ ತತ್ವಾದರ್ಶ ಪಾಲಿಸಿ

Kopala - Desk - Eraveni

ಸಿಂಧನೂರು: ಶರಣ ಮಡಿವಾಳ ಮಾಚಿದೇವರು ವಚನಗಳ ಮೂಲಕ ಸಮಾಜ ಸುಧಾರಣೆಗೆ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ತಹಸಿಲ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 12ನೇ ಶತಮಾನದ ಶರಣರಲ್ಲಿ ಮಡಿವಾಳ ಮಾಚಿದೇವ ವಿಶೇಷವಾಗಿ ಕಾಣುತ್ತಾರೆ. ಬಸವಣ್ಣ ಅವರ ಅನುಯಾಯಿಯಾಗಿ ಸಮಾಜಕ್ಕೆ ಶುದ್ಧ ಕಾಯಕದ ಮಹತ್ವ ತಿಳಿಸಿದ್ದಾರೆ. ಇವರ ವಚನಗಳು ಸಮಾಜಕ್ಕೆ ದಾರಿದೀಪ ಎಂದರು.

ತಹಸೀಲ್ದಾರ್ ಅರುಣ್ ದೇಸಾಯಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಜಿಪಂ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಅನುಭಾವಿ ನಿರುಪಾದೆಪ್ಪ ಗುಡಿಹಾಳ, ನಗರಸಭೆ ಮಾಜಿ ಅಧ್ಯಕ್ಷ ಕೆ.ಶರಣಪ್ಪ ತೆಂಗಿನಕಾಯಿ, ಬಸವರಾಜ ವಕೀಲ, ಕಸಾಪ ತಾಲೂಕು ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ನಾಮದೇವಗೌಡ ಇತರರಿದ್ದರು.