ದಾವಣಗೆರೆ: ಮಡಿವಾಳ ಮಾಚಿದೇವ ಸಂಘ ಹಾಗೂ ಮಡಿಕಟ್ಟೆ ಸಮಿತಿ ಸಹಯೋಗದಲ್ಲಿ ವಿನೋಬಾ ನಗರದ ಶ್ರೀ ಮಾಚಿದೇವ ಸಮುದಾಯ ಭವನದಲ್ಲಿ ಸೆಪ್ಟೆಂಬರ್ 11ರಂದು ಶ್ರೀ ಮಡಿವಾಳ ಮಾಚಿದೇವರ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಘದ ಜಿಲ್ಲಾಧ್ಯಕ್ಷ ಎಂ.ನಾಗೇಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಮಾಚಿದೇವ ಸಮುದಾಯ ಭವನದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸೆ.11ರ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿವೆ. ಜಿಲ್ಲೆಯ ಸಚಿವರು, ಸಂಸದರು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಸಹಕಾರ್ಯದರ್ಶಿ ಆರ್.ಎನ್.ಧನಂಜಯ, ಖಜಾಂಚಿ ಸುರೇಶ್ ಎಂ.ಕೋಗುಂಡೆ, ಉಪಾಧ್ಯಕ್ಷ ಪಿ.ಮಂಜುನಾಥ್, ಜಿ.ವಿಜಯಕುಮಾರ್, ಬಿ.ಅಜ್ಜಯ್ಯ, ಎಚ್.ದುಗ್ಗಪ್ಪ, ಪತ್ರಕರ್ತ ಎಂ.ವೈ.ಸತೀಶ್ ಇತರರು ಇದ್ದರು.