??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

100 ಯೂನಿಟ್ ಸಂಗ್ರಹ

ಎ. ಆರ್. ರಘುರಾಮ

ಮದ್ದೂರು : ತಾಲೂಕಿನ ಗೆಜ್ಜಲಗೆರೆ ವಿನಾಯಕ ಗೆಳೆಯರ ಬಳಗ ಹಮ್ಮಿಕೊಂಡಿರುವ 10ನೇ ವರ್ಷದ ಗಣೇಶ ಚತುರ್ಥಿಯ ಪ್ರಯುಕ್ತ ಮಂಡ್ಯದ ಸರ್ಕಾರಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಗೆಜ್ಜಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಡೆದ ಶಿಬಿರಕ್ಕೆ ಗೆಳೆಯರ ಬಳಗದ ಅಧ್ಯಕ್ಷ ನಿರಂಜನ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಗ್ರಾಮದಲ್ಲಿ ಕಳೆದ ಹಲವು ವರ್ಷಳಿಂದಲೂ ಸಮಾಜಮುಖಿ ಮತ್ತು ಧಾರ್ಮಿಕ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗಿದೆ. ಇದಕ್ಕೆ ಗ್ರಾಮಸ್ಥರ ಸಹಕಾರವೂ ಇದೆ ಎಂದರು.
ಗಣೇಶ ಪ್ರತಿಷ್ಠಾಪನೆ ಅಂಗವಾಗಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸುವ ಚಟುವಟಿಕೆಗಳಿವೆ. ಚಿತ್ರಕಲಾ ಸ್ಪರ್ಧೆ, ಲೆಮೆನ್‌ಸ್ಪೂನ್, ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಮಡಿಕೆ ಹೊಡೆಯುವುದು, ರಂಗೋಲಿ ಸ್ಪರ್ಧೆ, ಹಗ್ಗಜಗ್ಗಾಟ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮೀಣ ಕ್ರೀಡೆಗಳಿಗೂ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ತಿಳಿಸಿದರು. ಶಿಬಿರದಲ್ಲಿ 100 ಯುವಕರು ರಕ್ತದಾನ ಮಾಡಿ ಮಾನವೀಯತೆ ಮೆರೆದರು. 100 ಯೂನಿಟ್ ರಕ್ತ ಸಂಗ್ರಹವನ್ನು ಸರ್ಕಾರಿ ಮೆಡಿಕಲ್ ಕಾಲೇಜಿನ ರಕ್ತನಿಧಿಗೆ ಕೊಡಲಾಯಿತು.
ಗೆಳೆಯರ ಬಳಗದ ಮುಖಂಡರಾದ ಸಂದೀಪ್, ದಿಲೀಪ್, ವಿಕಾಸ್, ಚಂದನ್, ಮಂಜು, ಜೀವನ್, ಸಂತೋಷ್, ಪ್ರತಾಪ್, ದಿವಾಕರ್, ಶಂಕರ್, ಸುನೀಲ್ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜು ವೈದ್ಯ ವಿದ್ಯಾರ್ಥಿಗಳು ಹಾಜರಿದ್ದರು.