ವಿಜಯವಾಣಿ ಸುದ್ದಿಜಾಲ ಉಡುಪಿ
ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀಮಧ್ವಾಚಾರ್ಯರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಸಿದ್ಧತೆ ನಡೆಸಿದೆ. ಅ.2ರಂದು ಸಂಜೆ 4 ಗಂಟೆಗೆ ವಿಜಯದಶಮಿಯ ಶುಭದಿನದಂದು ರಾಜಾಂಗಣದಲ್ಲಿ ಧಾರ್ಮಿಕ ಸಭೆ ಆಯೋಜಿಸಲಾಗಿದೆ.
ಸಭಾ ಕಾರ್ಯಕ್ರಮದ ಬಳಿಕ ಸಂಜೆ 6:30ರಿಂದ ಡಾ. ವಿದ್ಯಾಭೂಷಣ ಅವರಿಂದ ಗಾನ ಲಹರಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಧ್ವ ಜಯಂತಿಯ ಆಯೋಜಕ ಮುರಳಿ ತಂತ್ರಿ, ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.