ಜಿಲ್ಲೆ

ಕೊಡಗಿನ ೨ ಎಂಎಲ್‌ಎ ಸ್ಥಾನಕ್ಕೂ ಎಎಪಿ ಸ್ಪರ್ಧೆ

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಅಮ್ ಆದ್ಮಿ ಪಾರ್ಟಿ ಸ್ಥಾಪನೆಯಾಗಿ ೧೦ ವರ್ಷ ಪೂರೈಸಿದ ಹಿನ್ನೆಲೆ ಜಿಲ್ಲಾ ಘಟಕದಿಂದ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತ್ತೆಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೋಳಿಬೈಲು ಚಿನ್ನಪ್ಪ ವೆಂಕಟೇಶ್ ಹೇಳಿದರು.

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕೊಡಗಿನ ೨ ಕ್ಷೇತ್ರದಲ್ಲಿಯೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆಂದು ಶನಿವಾರ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು.ದೇಶ ಮತ್ತು ರಾಜ್ಯಕ್ಕೆ ಪರ್ಯಾಯ ಪಕ್ಷದ ಅನಿವಾರ್ಯತೆ ಇದೆ. ಈ ಸ್ಥಾನವನ್ನು ನಮ್ಮ ಪಕ್ಷ ತುಂಬಲಿದೆ ಎಂದು ಹೇಳಿದರು.

ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಮಹತ್ತರ ಬದಲಾವಣೆ ತರಲಾಗಿದೆ. ಶಿಕ್ಷಣಕ್ಕೆ ಒತ್ತು ನೀಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಆರೋಗ್ಯ ವಲಯ ಸುಧಾರಣೆ ಕಂಡಿದೆ. ಉಚಿತವಾಗಿ ನೀರು ಪೂರೈಸಲಾಗುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ. ಪಂಜಾಬ್‌ನಲ್ಲಿಯೂ ಉತ್ತಮ ಆಡಳಿತ ನೀಡಲಾಗುತ್ತಿದೆ ಎಂದರು.

ಜಿಲ್ಲಾಧ್ಯಕ್ಷ ಎಂ.ಕೆ. ಅಪ್ಪಯ್ಯ, ಪ್ರಧಾನ ಕಾರ್ಯದರ್ಶಿ ಎಚ್.ಪಿ. ಪೃಥ್ವಿ, ಭಾಗಮಂಡಲ ಅಧ್ಯಕ್ಷ ಸಿ.ಎಂ. ರವಿ, ತಾವೂರು ಗ್ರಾಮ ಸಮಿತಿ ಅಧ್ಯಕ್ಷ ಕೆ.ಎಂ. ರವಿ ಗೋಷ್ಠಿಯಲ್ಲಿದ್ದರು.