ಮಡಿಕೇರಿ: ಪ್ರಕೃತಿ ವಿಕೋಪದಿಂದ ೨೦೧೮ ರಲ್ಲಿ ಹಾನಿಗೀಡಾಗಿರುವ ಅಬ್ಬಿಫಾಲ್ಸ್ ಮುಂಭಾಗದ ತೂಗುಸೇತುವೆಯನ್ನು ಪ್ರವಾಸೋದ್ಯಮ ಇಲಾಖೆ ಮೂಲಕ ನಿರ್ಮಿಸಿಕೊಡುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಭರವಸೆ ನೀಡಿದ್ದಾರೆ.
ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಅವರೊಂದಿಗೆ ಶುಕ್ರವಾರ ಅಬ್ಬಿಫಾಲ್ಸ್‌ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಈ ಭರವಸೆ ನೀಡಿ ದರು. ಅಬ್ಬಿಫಾಲ್ಸ್ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿ ದರು.
ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೦೧೮ನೇ ಸಾಲಿನ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಗಳನ್ನು ಜು.೨೨ ರಂದು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದೆಂದು ಡಿಸಿ ಭರವಸೆ ನೀಡಿದರು. ಗೋಶಾಲೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣ
ಗೊಳಿಸಲಾಗುವುದೆಂದರು.