ಜಿಲ್ಲೆ

ಮಡಿಕೇರಿ ವಕೀಲರ ಬೆಂಬಲ

ಸುನಿಲ್ ಪೊನ್ನೇಟಿ

ಮಡಿಕೇರಿ:

ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಅನವಶ್ಯಕವಾಗಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಆರೋಪಿಸಿರುವ ಮಡಿಕೇರಿ ವಕೀಲರ ಸಂಘ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ರಾಮನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘಟನೆ ಹಿನ್ನೆಲೆಯಲ್ಲಿ ೪೦ ವಕೀಲರ ಮೇಲೆ ರಾಮನಗರ ಪೊಲೀಸರು ಮೊಕದ್ದಮೆ ದಾಖಲಿಸಿರುವುದನ್ನು ರಾಜ್ಯವ್ಯಾಪಿ ವಕೀಲರು ಖಂಡಿಸಿದ್ದಾರೆ.

ವಕೀಲರ ಮೇಲೆ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ ರಾಮನಗರ ನ್ಯಾಯಾಲಯದ ಕಲಾಪಗಳನ್ನು ಅಲ್ಲಿನ ವಕೀಲರು ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ರಾಮನಗರದ ವಕೀಲ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪೊಲೀಸರ ನಿಲವು ಖಂಡಿಸಿ ಮಡಿಕೇರಿ ವಕೀಲರ ಸಂಘ ಕೂಡ ನಿರ್ಣಯ ಕೈಗೊಂಡಿದೆ. ವಕೀಲರ ವಿರುದ್ಧ್ದದ ಮೊಕದ್ದಮೆಯನ್ನು ಕೂಡಲೇ ಕೈಬಿಡಬೇಕು. ಪೊಲೀಸ್ ದೌರ್ಜನ್ಯಕ್ಕೆ ಕಡಿವಾಣ ಬೀಳಬೇಕೆಂದು ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ. ನಾಗರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.