ಮಡಿಕೇರಿ: ಕೊಡಗು ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಮಡಿಕೇರಿ ತಾಲೂಕಿನ ಪ್ರತಿನಿಧಿಗಳಿಗೆ ನೀಡಬೇಕೆಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರಾಜಪೇಟೆ ಹಾಗೂ ಸೋಮವಾಪೇಟೆ ತಾಲೂಕಿಗೆ ವಕ್ಫ್ ಅಧ್ಯಕ್ಷ ಸ್ಥಾನವನ್ನು ಈಗಾಗಲೇ ನೀಡಲಾಗಿದೆ. ಆದರೆ, ಮಡಿಕೇರಿ ತಾಲೂಕಿಗೆ ಇಲ್ಲಿಯವರೆಗೆ ಅಧ್ಯಕ್ಷ ಸ್ಥಾನ ಲಭಿಸದೆ ಇರುವುದರಿಂದ ಈ ಬಾರಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ತಾವು ಕೂಡ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಕಳೆದ ೪೦ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ವರಿಷ್ಠರು ತಮಗೆ ಸ್ಥಾನ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.