ಜಿಲ್ಲೆ

ಮಡಿಕೇರಿ ತಾಲೂಕು ಮಟ್ಟದ ಅಂಗವಿಕಲರ ಆಟೋಟ ಸ್ಪರ್ಧೆ

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಮಡಿಕೇರಿ ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ಸೋಮವಾರ ಗಾಂಧಿ ಮೈದಾನದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘಟನೆ ಸಂಯುಕ್ರಾಶ್ರಯದಲ್ಲಿ ಕಾರ್ಯ ಕ್ರಮ ಆಯೋಜಿಸಲಾಗಿತ್ತು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ರವೀಂದ್ರ ರೈ, ಸ್ವಾಮಿ ವೇಕಾನಂದ ಯುವ ಸಂಘಟನೆಯ ಸಲಹಾ ಸಮಿತಿ ಸದಸ್ಯ ಅಜಯ್ ಸೂದ್, ಆಪರ್ಚುನಿಟಿ ಶಾಲೆ ಮುಖ್ಯೋಪಾಧ್ಯಾಯರಾದ ಗೀತಾ ಶ್ರೀಧರ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಮುಖ್ಯೋಪಾಧ್ಯಾಯ ಮಹೇಶ್ವರ, ಕೊಡಗು ಜಿಲ್ಲಾ ವಿಕಲಚೇತನರ ಸಂಘದ ಈಶ್ವರಿ, ಜಿಲ್ಲಾ ದಿವ್ಯಂಗ ಸಂಘ ಸಂಪನ್ಮೂಲ ವ್ಯಕ್ತಿಗಳಾದ ಸುನಿಲ್, ನವೀನ, ಸಗಯ ಮೇರಿ ಪಾಲ್ಗೊಂಡಿದ್ದರು.