ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ಫೆ.1ರಂದು ಬೆಳಗ್ಗೆ 11ಗಂಟೆಗೆ ನಗರದ ಕರ್ನಾಟಕ ಸಂಘದ ಕೆವಿಎಸ್ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಯೋಜಿಸಲಾಗಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.