ಚಿಕ್ಕಮಗಳೂರು: ಹೆಣ್ಣು ಮಕ್ಕಳು ಕಾಣೆಯಾಗುವ ಹಿಂದೆ ದೊಡ್ಡ ಮಾಫಿಯಾ ನಮ್ಮ ದೇಶದಲ್ಲಿ ಇದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿö್ಮÃ ಚೌಧರಿ ತಿಳಿಸಿದರು.
ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ ೨೫೦ ಮಹಿಳೆಯರು ಕಾಣೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿz್ದೆÃನೆ ಎಂದರು.
ಕೌಟುAಬಿಕ ದೌರ್ಜನ್ಯದಲ್ಲಿ ಮಹಿಳೆಯರ ಹತ್ಯೆ, ಅತ್ಯಾಚಾರ, ಮಹಿಳೆಯರು ಕಾಣೆಯಾಗಿರುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಕೇಳಿz್ದÉÃನೆ ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯರು ಕೆಲವು ದೂರುಗಳನ್ನು ನೀಡಿದ್ದಾರೆ. ಆಸ್ಪತ್ರೆಗೆ ಅಡ್ಮಿಟ್ ಆಗಲು ಬರುವ ಸಂದರ್ಭದಲ್ಲಿ ಹಾಗೂ ರಕ್ತ ಪರೀಕ್ಷೆ ವೇಳೆಯಲ್ಲಿ ಓಡಾಡಿಸುತ್ತಾರೆ. ಇದರಿಂದ ಗರ್ಭಿಣಿಯರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಬೇಕು. ಈ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕೆಂದು ವೈದ್ಯರಿಗೆ ಸೂಚನೆ ನೀಡಿz್ದÉÃನೆ ಎಂದು ಹೇಳಿದರು.
ಒಂದು ಸಂಸ್ಥೆಯಲ್ಲಿ ಹತ್ತಕ್ಕಿಂತ ಹೆಚ್ಚು ಜನ ಮಹಿಳೆಯರಿದ್ದರೆ ಅಲ್ಲೊಂದು ಸಮಿತಿಯನ್ನ ರಚನೆ ಮಾಡಬೇಕೆಂದು ಕಾನೂನು ಇದೆ. ಮೆಡಿಕಲ್ ಕಾಲೇಜಿಗೆ ಹೋಗಿದ್ದ ಸಂದರ್ಭದಲ್ಲಿ ಸಮಿತಿ ರಚನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಸಮಿತಿ ಯಾವ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದರು.
ಪ್ರೀತಿಸಿ ಮದುವೆಯಾಗುವ ಸಂಖ್ಯೆ ಹೆಚ್ಚಾಗಿದೆ. ಅವರುಗಳಲ್ಲಿ ಹೆಚ್ಚಿನ ಸಂಖ್ಯೆಯವರು ಬಾಲ್ಯ ವಿವಾಹದೊಳಗೆ ಒಳಪಡುತ್ತಾರೆ. ಕೆಲವೆಡೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದೆ. ಈ ಕಾಯ್ದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರ ತೆರೆದ ಮನೆ ಕಾರ್ಯಕ್ರಮ ಜಾರಿಗೆ ತಂದಿದೆ. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿz್ದÉÃನೆ ಎಂದು ಹೇಳಿದರು.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರಿಗೆ ಮೊಟ್ಟೆ ಹಾಗೂ ಆಹಾರ ಧಾನ್ಯ ನೀಡುತ್ತಿಲ್ಲ ಎಂಬ ದೂರು ಬಂದಿದೆ. ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಆದರೆ ಅದರ ಸಮರ್ಪಕ ಜಾರಿಯತ್ತ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಈ ಹಿಂದೆ ಸಾಲದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಮೈಕ್ರೋ ಫೈನಾನ್ಸ್ ನಿಂದಾಗಿ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಪಡಂಭೂತವಾಗಿ ಬೆಳೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ಸೆಳೆಯಲಾಗುವುದು ಎಂದು ಹೇಳಿದರು.