ಜಿಲ್ಲೆ

ಮಹಾಶಿವರಾತ್ರಿ ದಕ್ಷಿಣ ಕನ್ನಡದ ಶಿವದೇವಾಲಯಗಳಲ್ಲಿ ಭಕ್ತರ ಸಂದಣಿ

Dakshina Kannada

ಮಂಗಳೂರು: ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಶಿವದೇವಾಲಯಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸತೊಡಗಿದ್ದಾರೆ.
ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರ, ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿಯ ಶ್ರೀ ಗೋಕರ್ಣನಾಥ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು ತೆರಳುತ್ತಿರುವುದು ಕಂಡುಬಂತು.
ಇಡೀ ದಿನ ದೇವಸ್ಥಾನಗಳಲ್ಲಿ ರುದ್ರ ಹವನ, ರುದ್ರ ಪಠಣ, ಭಜನೆ, ಭಕ್ತಿ ಸಂಗೀತ, ತಾಳಮದ್ದಳೆಯಂತಹ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಧರ್ಮಸ್ಥಳದಲ್ಲಿ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತಾದಿಗಳು ಪಾದಯಾತ್ರೆಯಲ್ಲಿ ಈಗಾಗಲೇ ಬಂದು ತಲಪಿದ್ದಾರೆ.