ಜಿಲ್ಲೆ

ಮಹಾಲಕ್ಷ್ಮೀ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

ವಿಜಯವಾಣಿ ಸುದ್ದಿಜಾಲ ಉಡುಪಿ

ಮಹಾಲಕ್ಮೀ ಕೋ-ಆಪರೇಟಿವ್​ ಬ್ಯಾಂಕ್​ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕ್​ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.

ಬ್ಯಾಂಕ್​ನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್​ಎಸ್​ಎಲ್​ಸಿಯಲ್ಲಿ ಶೇ.90, ದ್ವಿತೀಯ ಪಿಯುಸಿಯಲ್ಲಿ ಶೇ.85 ಹಾಗೂ 2023-&24ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.70 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಇತರ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿಯಲ್ಲಿ ಶೇ.95, ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ 2023--24ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.75 ಅಂಕ ಗಳಿಸಿರಬೇಕು.

ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್​ನ ಎಲ್ಲ ಶಾಖೆ ಹಾಗೂ ಬ್ಯಾಂಕ್​ನ ವೈಬ್​ಸೈಟ್​ www.mahalakshmicoopbank.com ನಲ್ಲಿ ಅರ್ಜಿಗಳು ಲಭ್ಯವಿದೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳುವಂತೆ ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.