ಜಿಲ್ಲೆ

ಮಹಾಲಕ್ಷ್ಮೀ ಬ್ಯಾಂಕ್​ ಅಧ್ಯಕ್ಷರಾಗಿ ಶಾಸಕ ಯಶ್​ಪಾಲ್​ ಸುವರ್ಣ ಅವಿರೋಧವಾಗಿ ಪುನರಾಯ್ಕೆ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್​ ಬ್ಯಾಂಕ್​ 2023&-28ನೇ ಸಾಲಿನ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಬ್ಯಾಂಕಿನ ಉಪಾಧ್ಯಕ್ಷರಾಗಿ ವಾಸುದೇವ ಸಾಲ್ಯಾನ್​, ನಿರ್ದೇಶಕರಾಗಿ ಕೆ ಸಂಜೀವ ಶ್ರೀಯಾನ್​, ವೆಂಕಟರಮಣ ಕಿದಿಯೂರು, ಶಶಿಕಾಂತ ಬಿ ಕೋಟ್ಯಾನ್​, ಶೋಭೇಂದ್ರ, ವಿನಯ ಕರ್ಕೇರ, ನಾರಾಯಣ ಟಿ ಅಮೀನ್​, ರಾಮ ನಾಯ್ಕ್​ ಎಚ್​, ಶಿವರಾಮ ಕುಂದರ್​, ಸುರೇಶ ಬಿ ಕರ್ಕೇರ, ಸದಾನಂದ ಬಳ್ಕೂರು, ವನಜ ಕಿದಿಯೂರು, ವನಜ ಜೆ ಪುತ್ರನ್​, ಮನೋಜ್​ ಆಯ್ಕೆಯಾಗಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್​ ಬ್ಯಾಂಕ್​ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, 2022&-23 ನೇ ಸಾಲಿನಲ್ಲಿ ಬ್ಯಾಂಕ್​ 9,464 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ಕಳೆದ 14 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ಶೇಕಡಾ 18 ಡಿವಿಡೆಂಡ್​ ನೀಡುವ ಕರಾವಳಿ ಕರ್ನಾಟಕದ ಏಕೈಕ ಪಟ್ಟಣ ಸಹಕಾರ ಬ್ಯಾಂಕ್​ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2008 ರಿಂದ ಬ್ಯಾಂಕಿನ ನಿರ್ದೇಶಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಯಶ್​ ಪಾಲ್​ ಸುವರ್ಣ 2018ರಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಬ್ಯಾಂಕ್​ ಸರ್ವಾಂಗೀಣ ಪ್ರಗತಿ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಯಶ್ಪಾಲ್​ ಅವರು 2014 ರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಮೀನು ಮಾರಾಟ ಫೆಡರೇಶನ್​ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ನಿರ್ದೇಶಕರಾಗಿ, ಹಲವಾರು ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯಶ್​ ಪಾಲ್​ ಸುವರ್ಣ ತಮ್ಮ ಸಹಕಾರ ಕ್ಷೇತ್ರದ ಸಾಧನೆಗಾಗಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 2022 ನೇ ಸಾಲಿನ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಪ್ರಸ್ತುತ ಉಡುಪಿ ಶಾಸಕರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಮೀನುಗಾರಿಕೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.