ಜಿಲ್ಲೆ

ಮಹಾಲಕ್ಷ್ಮಿ ಬ್ಯಾಂಕ್​ಗೆ 21.40 ಕೋಟಿ ರೂ. ಲಾಭ

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ  ಮಹಾಲಕ್ಷ್ಮಿ  ಕೋ-ಆಪರೇಟಿವ್​ ಬ್ಯಾಂಕ್​ 2024-25ನೇ ಸಾಲಿನಲ್ಲಿ 1063 ಕೋಟಿ ರೂ. ವ್ಯವಹಾರ ನಡೆಸಿ, 21.40 ಕೋಟಿ ರೂ. ಲಾಭ ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಾಸಕ ಯಶ್​ಪಾಲ್​ ಎ. ಸುವರ್ಣ ತಿಳಿಸಿದ್ದಾರೆ.

ಮಹಾಲಕ್ಷಿ$್ಮ ಕೋ ಆಪರೇಟಿವ್​ ಬ್ಯಾಂಕ್​ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್​ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿದೆ. ಬ್ಯಾಂಕ್​ 2024-&25ನೇ ಸಾಲಿನಲ್ಲಿ 604 ಕೋಟಿ ರೂ. ಠೇವಣಿ, ರೂ.459 ಕೋಟಿ ಸಾಲ ಮತ್ತು ಮುಂಗಡ, 39.93 ಕೋಟಿ ರೂ. ಪಾಲು ಬಂಡವಾಳದೊಂದಿಗೆ 9.15 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಶೂನ್ಯ ನಿವ್ವಳ ಅನುತ್ಪಾದಕ ಸಾಲದ ಪ್ರಮಾಣದೊಂದಿಗೆ ಉತ್ತಮ ಪ್ರಗತಿ ಸಾಧಿಸಿದೆ ಎಂದು ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ಅತೀ ಹೆಚ್ಚು ಡಿವಿಡೆಂಡ್​ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್​ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷಿ$್ಮ ಬ್ಯಾಂಕ್​, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿಯನ್ನು ಪಡೆದಿದೆ. ಸತತವಾಗಿ 9 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್​ ನೀಡುವ ಪ್ರತಿಷ್ಠಿತ ಪ್ರಶಸ್ತಿ ಸಾಧನ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಆಧುನಿಕ ಸೌಲಭ್ಯ

ಪ್ರಸ್ತುತ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಯನ್ನು ಒಳಗೊಂಡಿರುತ್ತದೆ. ಬಾಡಿಗೆ ಕಟ್ಟಡದಲ್ಲಿರುವ ಉಡುಪಿ ಶಾಖೆ ಶೀಘ್ರದಲ್ಲಿಯೇ ನಗರದ ಹೃದಯ ಭಾಗದಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದ್ದು,

ರಾಷ್ಟ್ರೀಕೃತ ಬ್ಯಾಂಕಿನಲ್ಲಿ ದೊರಕುವ ಎಲ್ಲಾ ಆಧುನಿಕ ಸೌಲಭ್ಯಗಳು ಲಭ್ಯವಿದೆ. ಮೊಬೈಲ್​ ಬ್ಯಾಂಕಿಂಗ್​, ಐಎಂಪಿಎಸ್​ ಸೇವೆ ಸಹಿತ ಭಾರತ್​ ಬಿಲ್​ ಪೇಮೆಂಟ್​ ಸಿಸ್ಟಮ್​, ಯುಪಿಐ ಸೇವೆ ಲಭ್ಯವಿದ್ದು, ಸುಮಾರು 5 ಸಾವಿರ ಗ್ರಾಹಕರು ಇದರ ಸದುಪಯೋಗವನ್ನು ಪಡೆದಿದ್ದಾರೆ.

ಸಮಾಜಮುಖಿ ಸೇವೆ

ಪ್ರತಿವರ್ಷದಂತೆ ಬ್ಯಾಂಕಿನ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸುಮಾರು 1,500 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಉಚ್ಚಿಲ ದಸರಾ ಮಹೋತ್ಸವದ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ತೃತೀಯ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ.