ಜಿಲ್ಲೆ

Maharashtra Assembly Elections ಬಿಜೆಪಿಗೆ 129+ ಸೀಟು ಕಾರವಾರದಲ್ಲಿ ವಿಜಯೋತ್ಸವ

Uttara Kannada - Subash Hegde

ಕಾರವಾರ:  Maharashtra Assembly Elections ಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಕೂಟ ಅಭೂತಪೂರ್ವ ಜಯಗಳಿಸಿದ ಕಾರಣ ಕಾರವಾರ ಸವಿತಾ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಸದಸ್ಯೆ ರೋಶನಿ ಮಾಳ್ಸೇಕರ್, ಬಿಜೆಪಿ ನಗರ ಅಧ್ಯಕ್ಷ ನಾಗೇಶ ಕುರ್ಡೇಕರ್ ಹಾಗೂ ಇತರರು ಪಾಲ್ಗೊಂಡಿದ್ದರು.

Maharashtra Assembly Elections ರೂಪಾಲಿ ನಾಯ್ಕ ಪ್ರತಿಕ್ರಿಯೆ

ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ (ಮಹಾಯುತಿ) ಐತಿಹಾಸಿಕ ಜಯಗಳಿಸಿರುವುದು ಜನತೆ ಪಕ್ಷದ ಮೇಲೆ ಇಟ್ಟಿರುವ ವಿಶ್ವಾಸದ ದ್ಯೋತಕವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಪ್ರಮುಖ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದಲ್ಲಿ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಮಾಡಿಕೊಂಡ ಮಹಾವಿಕಾಸ ಅಘಾಡಿಯ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಅಲ್ಲಿನ ಬಿಜೆಪಿ ಗೆಲುವಿನಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ.

ರಾಜ್ಯದಲ್ಲಿ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಗಳಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಆದರೆ, ಅಧಿಕಾರದಲ್ಲಿರುವ ಪಕ್ಷಕ್ಕೆ ಜನತೆ ಮಣೆ ಹಾಕಿದ್ದಾರೆ. ಜಾರ್ಖಂಡ ರಾಜ್ಯದಲ್ಲೂ ಗೆಲ್ಲುವ ವಿಶ್ವಾಸ ಇತ್ತು ಎಂದಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿಕೂಟ ಗಮನಾರ್ಹ ಸಾಧನೆ ಮಾಡಿದೆ. ಬಿಹಾರದಲ್ಲಿ ಎಲ್ಲ ನಾಲ್ಕು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಉತ್ತರ ಪ್ರದೇಶದಲ್ಲೂ ಅತಿ ಹೆಚ್ಚು ಸ್ಥಾನ ಗಳಿಸಿದೆ. ಭಾರತೀಯ ಜನತಾ ಪಕ್ಷ

Maharashtra Assembly Elections ಮಹಾರಾಷ್ಟ್ರ ಹಾಗೂ ಇತರೆಡೆ ನಡೆದ ಉಪ ಚುನಾವಣೆಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವುದು ಸಂತಸ ತಂದಿದೆ ಎಂದು ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.