ಕುಕನೂರು: ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಹಿರೇಸಿಂದೋಗಿಯ ಶ್ರೀ ಚನ್ನಬಸವೇಶ್ವರ ಶಾಖಾಮಠದ 15ನೇ ವರ್ಷದ ಶ್ರೀ ಚನ್ನಬಸವೇಶ್ವರ ಮಹಾರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಅಂಕಲಿಮಠದ ತ್ರಿವಿಧ ದಾಸೋಹ ರತ್ನ ಶ್ರೀ ವೀರಭದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಳಗ್ಗೆಯಿಂದಲೇ ಗ್ರಾಮಸ್ಥರು ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಭಕ್ತಿ ಸೇವೆ ಸಲ್ಲಿಸಿದರು. ಮಧ್ಯಾಹ್ನ ಅನ್ನಪ್ರಸಾದ ಜರುಗಿತು. ಸಂಜೆ ವೇಳೆ ಮಹಾರಥೋತ್ಸವ ಅದ್ದೂರಿಯಾಗಿ ಸಾಗಿತು. ಭಕ್ತರು ಉತ್ತತ್ತಿ, ಬಾಳೆ ಹಣ್ಣು ಸಮರ್ಪಿಸಿ ಭಕ್ತಿ ಮೆರೆದರು. ಹರಗುರುಚರಮೂರ್ತಿಗಳು, ಗಣ್ಯರು ಹಾಗೂ ಭಕ್ತರು, ಶ್ರೀ ಚನ್ನಬಸವೇಶ್ವರ ಸೇವಾ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಿದ್ದರು.