ವಿಜಯಪುರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಕ್ಕಪ್ಪ ಯಡವೆ, ಮುತ್ತಪ್ಪ ಕೆ.ಶಿವಣ್ಣನವರ ಮತ್ತಿತರರಿದ್ದಾರೆ.  
ಜಿಲ್ಲೆ

ಮಹರ್ಷಿ ಭಗೀರಥ ಜಯಂತಿ ಆಚರಣೆ

ವಿಜಯಪುರ: ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಭಗಿರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು.

ತಹಸೀಲ್ದಾರ್ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಅಯ್ಯೂಬ್ ದ್ರಾಕ್ಷಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಜಕ್ಕಪ್ಪ ಯಡವೆ, ಮುಖಂಡರಾದ ಮುತ್ತಪ್ಪ ಕೆ.ಶಿವಣ್ಣನವರ, ಅನಿಲ್ ಅವಳೆ, ಯಲ್ಲಪ್ಪ ಬಂಡಿ, ಡಾ.ಸುರೇಶ ಕಾಗಲಕರ್‌ರೆಡ್ಡಿ, ಸಿದ್ದು ಗೆರಳೆ, ಸಾಬು ಕಾತ್ರಾಳ, ಜೆ.ಎಲ್. ಕಸ್ತೂರಿ, ಶ್ರೀನಿವಾಸ್ ಅಂಬಲಿ, ಸುರೇಶ ಶಹಾಪೂರ, ಪುಂಡಲಿಕ್ ಉಪ್ಪಾರ, ವಿದ್ಯಾವತಿ ಅಂಕಲಗಿ ಮತ್ತಿತರರಿದ್ದರು.

ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಕಾರ್ಯಕ್ರಮ ನಡೆಯಿತು.