ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾರತದ ಮಣ್ಣಿನಲ್ಲಿ ಜನಿಸಿದ್ದರೂ ಅವರ ತತ್ವ, ಸಿದ್ಧಾಂತ ಹಾಗೂ ಪ್ರತಿಪಾದಿಸಿದ ಮೌಲ್ಯಗಳಿಂದಾಗಿ ಅವರು ಇಡೀ ವಿಶ್ವಕ್ಕೆ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ನಗರದ ಜಿ.ಪಂ. ರಸ್ತೆಯ ಮಹಾತ್ಮ ಗಾಂಧಿ ಭವನದಲ್ಲಿ (ಹುತಾತ್ಮರ ದಿನಾಚರಣೆ) ಸವೋರ್ದಯ ದಿನದ ಹಿನ್ನೆಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಅಮೆರಿಕದ ಡಾ. ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ, ಬರ್ಮಾ ದೇಶದ ಆಂಗ್ ಸಾನ್ ಸೂಕಿ ಹೀಗೆ ಜಗತ್ತಿನ ನೂರಾರು ನಾಯಕರಿಗೆ ಗಾಂಧಿ ಸ್ಫೂರ್ತಿಯಾಗಿದ್ದಾರೆ ಎಂದರು.
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಮಹಾತ್ಮರು ಪ್ರತಿಪಾದಿಸಿದ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಸ್ಪಿ ಲಕ್ಷ$್ಮಣ ನಿಂಬರಗಿ ಮಾತನಾಡಿ, ಮಹಾತ್ಮ ಗಾಂಧೀಜಿ ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನ ನಿತ್ಯವೂ ಸ್ಮರಿಸುವಂತದ್ದು ಎಂದರು.
ಸೈನಿಕ ಶಾಲೆ ಪ್ರಾಚಾರ್ಯ (ಗ್ರೂಪ್ ಕ್ಯಾಪ್ಟನ್) ಪ್ರತಿಭಾ ಬಿಸ್ಟ್ ಮಾತನಾಡಿದರು. ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಉಪನ್ಯಾಸಕ ರುದ್ರಯ್ಯ ವಿಶೇಷ ಉಪನ್ಯಾಸ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಖಾದಿ ಗ್ರಾಮೋದ್ಯೋಗ ಸಂದ ಅಧ್ಯಕ್ಷ ಬಾಪೂಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯ ನೇತಾಜಿ ಗಾಂಧಿ ಸ್ವಾಗತಿಸಿ, ನಿರೂಪಿಸಿದರು. ಪೀಟರ್ ಅಲೆಕ್ಸಾಂಡರ್ ವಂದಿಸಿದರು.
ಖಾದಿ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎನ್.ಡಿ. ಕಾಂಬಳೆ, ಪ್ರಶಾಂತ ಚನಗೊಂಡ, ಯಲ್ಲಪ್ಪ, ಬಾಳೂ ಜೇವೂರ ಮತ್ತಿತರರಿದ್ದರು.