ಧಾರವಾಡ: ರಾಷ್ಟಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆಯ ಜಿಲ್ಲೆಯ ಗರಗ ಕ್ಷೇತ್ರಿಯ ಸೇವಾ ಸಂಘ 2023ರ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ.
ರಾಜ್ಯ ಹೈಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ಬಿ. ವೀರಪ್ಪ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀಮನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಿಸಿದೆ.
ರಾಷ್ಟçಪಿತ ಮಹಾತ್ಮಾ ಗಾಂಧಿ ಅವರ ಜನ್ಮದಿನವಾದ ಅ. 2ರಂದು ಸಂಜೆ 4.30ಕ್ಕೆ ಬೆಂಗಳೂರಿನ ಭಗವಾನ್ ಮಹಾವೀರ ರಸ್ತೆಯ ವಾರ್ತಾ ಸೌಧದ ಸುಲೋಚನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಗ ಸೇವಾ ಸಂಘಕ್ಕೆ 5 ಲಕ್ಷ ರೂಪಾಯಿ ನಗದು ಒಳಗೊಂಡ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡುವರು.