ಬಸವನಬಾಗೇವಾಡಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಮಾಜಿ ಅಧ್ಯಕ್ಷ ಸಂಜಿವ ಕಲ್ಯಾಣಿ ಮಹಾಂತೇಶ, ಸಾಸಾಬಾಳ, ಪರಶುರಾಮ ಬೆಕಿನಾಳ, ಗುರು ಗುಡಿಮನಿ ಇತರರಿದ್ದರು.  
ಜಿಲ್ಲೆ

ಮಹಾತ್ಮರ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದಿರಲಿ

ಬಸವನಬಾಗೇವಾಡಿ: ಮಹಾತ್ಮರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೆ ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾದಾಗ ಮಾತ್ರ ಜಯಂತಿಗೆ ಅರ್ಥ ಬರುತ್ತದೆ ಎಂದು ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ ಹೇಳಿದರು.

ಪಟ್ಟಣದ ವಿಜಯಪುರ ರಸ್ತೆಯ ಬಸವ ಭವನದಲ್ಲಿ ಸಮಾಜಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಸಮಾನತೆಗೆ ಹೋರಾಟ ಮಾಡಿದ ಮಹಾನ್ ಪುರುಷರು ಅಂತವರ ಆಚಾರ ವಿಚಾರಗಳು ಇಂದಿನ ನಮ್ಮ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಿದೆ ಎಂದರು.

ಬಸವನಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಯಾವುದೇ ಒಂದು ಕಾರ್ಯಕ್ರಮ ಆಯೋಜಿಸಿದಾಗ ಆ ಕಾರ್ಯಕ್ರಮ ಯಶಸ್ವಿಯಾಗಿ ಮುನ್ನಡೆಯಬೇಕಾದರೆ ಹಿರಿಯರ ಮಾರ್ಗದರ್ಶನ ಅಗತ್ಯವಿದೆ ಎಂದರು.

ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಅರವಿಂದ ಸಾಲವಾಡಗಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ಇಂದಿನ ಜಯಂತಿ ಅರ್ಥಪೂರ್ಣವಾಗಿ ಆಚರಿಸುವಲ್ಲಿ ವಿಫಲವಾಗಿದ್ದು, ಇದು ಮಹಾತ್ಮರಿಗೆ ಅವಮಾನಿಸಿದಂತಾಗಿದೆ ಎಂದು ದೂರಿದರು.

ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಶಿವನಗೌಡ ಬಿರಾದಾರ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಗಮೇಶ ಓಲೆಕಾರ ಮಾತನಾಡಿದರು.

ಸಾಹಿತಿ ಸಹದೇವ ಗುಡದಿನ್ನಿ ಉಪನ್ಯಾಸ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಮಾಜಿ ಅಧ್ಯಕ್ಷ ಸಂಜಿವ ಕಲ್ಯಾಣಿ ಮಹಾಂತೇಶ, ಸಾಸಾಬಾಳ, ಪರಶುರಾಮ ಬೆಕಿನಾಳ, ಗುರು ಗುಡಿಮನಿ, ರವಿ ನಾಯ್ಕೋಡಿ, ಬಸನಗೌಡ ಬಿರಾದಾರ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮಂಗಾನವರ, ಬಿಇಒ ವಸಂತ ರಾಠೋಡ, ತಾಪಂ ಇಒ ಪ್ರಕಾಶ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ ಹಿರೇಮನಿ, ಪುರಸಭೆ ಮುಖ್ಯಧಿಕಾರಿ ರುದ್ರೇಶ ಚಿತ್ತರಗಿ, ಸಿಡಿಪಿಒ ಶಿಲ್ಪಾ ಹಿರೇಮಠ, ಹಿಂದುಳಿದ ವರ್ಗದ ಇಲಾಖೆ ಅಧಿಕಾರಿ ಎಸ್.ವಿ. ನಿಂಬಾಳ ಇತರರಿದ್ದರು.

ವೀರೇಶ ಹೊನವಾಡ ಸ್ವಾಗತಿಸಿದರು. ರಶ್ಮಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಶಿವಾನಂದ ಮಂಗನ್ನವರ ವಂದಿಸಿದರು.

ಜಯಂತಿ ಕಾರ್ಯಕ್ರಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಭಾಗವಹಿಸಿದ್ದರು. ಇದನ್ನು ಕಂಡು ವಿವಿಧ ದಲಿತಪರ ಸಂಘಟನೆಗಳ ಮುಖಂಡರು ತಾಲೂಕು ಆಡಳಿತ ಹಾಗೂ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.