ವಿಟ್ಲ: ಎರುಂಬು ಸುಜ್ಞಾನ ಮಹಿಳಾ ಮಂಡಳಿ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಎರುಂಬು ಶ್ರೀ ವಿಷ್ಣುಮಂಗಲ ದೇವಸ್ಥಾನ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಶ್ರೀ ವಿಷ್ಣುಮಂಗಲ ದೇವರಿಗೆ ಕಾರ್ತಿಕ ಪೂಜೆ, ಸಾಮೂಹಿಕ ಪ್ರಾರ್ಥನೆ, ಭಜನಾ ಕಾರ್ಯಕ್ರಮ, ವರಮಹಾಲಕ್ಷ್ಮೀ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ, ಮಹಾ ಮಂಗಳಾರತಿ ನಡೆಯಿತು. ಅರ್ಚಕ ಬಾಲಕೃಷ್ಣ ಕಾರಂತ ನೇತೃತ್ವದಲ್ಲಿ ಧಾರ್ಮಿಕ ವಿಽ ನೆರವೇರಿತು.