ಜಿಲ್ಲೆ

ಮೈಗೆ ಹುಷಾರಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Haveri - Kariyappa Aralikatti

ಹಿರೇಕೆರೂರ: ಮೈಯಲ್ಲಿ ಹುಷಾರಿಲ್ಲದ ಕಾರಣ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೇ ವಿರಾಪುರ ಗ್ರಾಮದಲ್ಲಿ ನಡೆದಿದೆ.
ಅರುಣಕುಮಾರ ಮಲ್ಲೇಶಪ್ಪ ಪೂಜಾರ (36) ಮೃತ ವ್ಯಕ್ತಿ.
ಈತ ಮೈಯಲ್ಲಿ ಹುಷಾರಿಲ್ಲದ ಕಾರಣ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.