ಜಿಲ್ಲೆ

ಅತ್ತಿಗೆಗೆ ಚಾಕು ಇರಿದ ಮೈದುನ

ಮರಿದೇವ ಹೂಗಾರ

ಹುಬ್ಬಳ್ಳಿ: ಸಹೋದರರ ಮಧ್ಯೆ ನಡೆದ ಜಗಳದಲ್ಲಿ ಮೈದುನನೇ ಅತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡದ ಘಟನೆ ಇಲ್ಲಿಯ ಎಸ್.ಎಂ. ಕೃಷ್ಣ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಸಾಜಿಯಾ ಮಹಮ್ಮದ್ ಹನೀಫ್ ನಾಲಬಂದ ಕೊಲೆಯಾದ ಮಹಿಳೆ. ಮಹ್ಮದ್ ಹನೀಫ್ ನಾಲಬಂದ ಗಾಯಗೊಂಡಿದ್ದು, ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಸೀರ್ ನಾಲಬಂದ ಚಾಕು ಇರಿದವನು ಎನ್ನಲಾಗಿದೆ.

ಮನೆಯಲ್ಲಿ ಅಣ್ಣ ತಮ್ಮ ಅತ್ತಿಗೆ ಮೂವರು ವಾಸ ಮಾಡುತ್ತಿದ್ದರು. ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಮೈದುನ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ.

ಕೂಡಲೇ ಗಾಯಗೊಂಡ ಸಾಜಿಯಾಳನ್ನು ಕೆಎಂಸಿಆರ್‌ಐಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮಹ್ಮದ್ ಹನೀಫ್ ತಲೆಗೆ ಗಂಭೀರ ಗಾಯವಾಗಿದೆ ಎಂಬುದು ತಿಳಿದು ಬಂದಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಅಪರಾಧ ವಿಭಾಗದ ಡಿಸಿಪಿ ಮಹಾನಿಂಗ ನಂದಗಾವಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.