ಜಿಲ್ಲೆ

ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿ

ಜಿ.ಹೆಚ್. ಧನ್ಯಕುಮಾರ್

ತರೀಕೆರೆ: ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಗಿರಿಜನ ಆಶ್ರಮ ವಸತಿ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಗಿರಿಜನ ಅಭಿವೃದ್ಧಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ಆರ್.ರಮೇಶ್ ಭೇಟಿ ನೀಡಿ ಪರಿಶೀಲಿಸಿದರು. 2025-26ನೇ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅವರು ಅಲ್ಲಿನ ನಿಲಯ ಪಾಲಕರು ಹಾಗೂ ಸಿಬ್ಬಂದಿಗೆ ಕೊಠಡಿಗಳ ಸ್ವಚ್ಛತೆ ಮೂಲ ಸೌಕರ್ಯದಲ್ಲಿ ಕೊರತೆ ಮತ್ತು ಬಡ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಡಿಎಸ್‌ಎಸ್ ಮುಖಂಡ ಮಹೇಂದ್ರ ಸ್ವಾಮಿ, ನಿಲಯ ಪಾಲಕರು, ಸಿಬ್ಬಂದಿ ಇದ್ದರು.