ಜಿಲ್ಲೆ

ನಾಡಿನ ಇಬ್ಬರು ವಿದ್ವಾಂಸರಿಗೆ ‘ಮೈತ್ರೀ ಪುರಸ್ಕಾರ‘

ಬೆಂಗಳೂರು: ಮೈತ್ರೀ ಸಂಸ್ಕೃತ-ಸಂಸ್ಕೃತಿ ಪ್ರತಿಷ್ಠಾನವು ಪ್ರತಿವರ್ಷವೂ ಕೊಡಮಾಡುವ 2024ನೇ ಸಾಲಿನ ‘ಮೈತ್ರೀ ಪುರಸ್ಕಾರ’ಕ್ಕೆ ನಾಡಿನ ಇಬ್ಬರು ವಿದ್ವಾಂಸರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ ಹಾಗೂ ಹಿರಿಯ ವಿದ್ವಾಂಸ ಡಾ. ಎಚ್.ವಿ. ನಾಗರಾಜರಾವ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು, ಸ್ಮರಣಿಕೆ, ಗ್ರಂಥ ಒಳಗೊಂಡಿದೆ. ಅ.17ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವೈಯ್ಯಲಿಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.