ಜಿಲ್ಲೆ

ಕೆಸರಿನ ಗುಂಡಿಯಲ್ಲಿ ಬಿದ್ದು ಪಾದಚಾರಿ ಸಾವು

Haveri - Kariyappa Aralikatti

ರಾಣೆಬೆನ್ನೂರ: ಮಳೆಯಿಂದಾಗಿ ನಿರ್ಮಾಣವಾಗಿದ್ದ ಕೆಸರಿನ ಗುಂಡಿಯಲ್ಲಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗಪ್ಪ ಸಾರ್ಥಿ (58) ಮೃತ ದುರ್ದೈವಿ.
ಈತ ಜಮೀನಿನಿಂದ ವಾಪಸ್ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ರಸ್ತೆಯಲ್ಲಿ ಮಳೆಯಿಂದ ನಿರ್ಮಾಣವಾಗಿದ್ದ ಕೆಸರಿನ ಗುಂಡಿಯಲ್ಲಿ ಕಾಲು ಜಾರಿ ಬಿದ್ದಿದ್ದರಿಂದ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.