ಕಳಸ: ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿ ಮಕರರೂಢಾ ಸ್ಕಂದಮಾತಾ ಅಲಂಕಾರದೊಂದಿಗೆ ಕಂಗೊಳಿಸಿದಳು. ವಿವಿಧ ಹೂ,ಅಲಂಕಾರ ಆಭರಣಗಳಿಂದ ಕಂಗೊಳಿಸಿದ ಅನ್ನಪೂರ್ಣೇಶ್ವರಿಯನ್ನು ಕಣ್ತುಂಬಿಸಲು ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಕಷ್ಟ ಕಾಲಕ್ಕೆ ಹೇಳಿಕೊಂಡಿದ ಹರಕೆಗಳನ್ನು ಭಕ್ತರು ತೀರಿಸಿಕೊಂಡರು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಪ್ತಶತಿ ಪಾರಾಯಣ, ವೇದ ಪಾರಾಯಣ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಮತ್ತು ಶ್ರೀಲಲಿತಾ ಮೂಲಮಂತ್ರ ಹೋಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ವಿದುಷಿ ಸುಮಂಗಲಾ ನಾಗರಾಜ್ ಮತ್ತು ತಂಡದಿಂದ ವೀಣಾ ವಾದನ, ಸಂಜೆ ಲಯಾಭಿನಯ ಸ್ಕೂಲ್ ಆ್ ರ್ಪಾಮಿಂಗ್ ಆರ್ಟ್ಸ್ ವಿದುಷಿ ಶೃತಿ ಸುನೀಲ್ ಮತ್ತು ತಂಡದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಮಂಗಳವಾರ ಮಯೂರಾರೂಢಾ ಕಾತ್ಯಾಯಿನೀ ಅಲಂಕಾರ ಪೂಜೆ, ಶ್ರೀಸರಸ್ವತಿ ಮೂಲಮಂತ್ರ ಹೋಮ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಸುಗಮ ಸಂಗೀತ ಮತ್ತು ಸಂಜೆ ಕೂಚಿಪುಡಿ ನಡೆಯಲಿದೆ.