ರಾಯಚೂರಿನ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಮಾತನಾಡಿದರು. ಡಿಎಚ್‌ಒ ಡಾ.ಸುರೇಂದ್ರಬಾಬು, ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಮಹ್ಮದ್ ಶಾಕೀರ್, ಜಿಲ್ಲಾ ಸರ್ವೇಣಾಕಾರಿ ಡಾ.ಗಣೇಶ, ಕುಷ್ಠರೋಗ ನಿಯಂತ್ರಣಾಕಾರಿ ಡಾ.ಯಶೋಧಾ ಇದ್ದರು. 
ಜಿಲ್ಲೆ

ಕುಷ್ಠ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ

ರಾಚಯ್ಯ ಸ್ವಾಮಿ

ರಾಯಚೂರು: ಕುಷ್ಠ ರೋಗದ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದು, ಚಿಕಿತ್ಸೆಯಿಂದ ರೋಗವನ್ನು ಗುಣಪಡಿಸಬಹುದಾಗಿದೆ ಎನ್ನುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಸ್ಥಳೀಯ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರು ರೋಗ ಲಕ್ಷಣಗಳು ಕಂಡು ಬಂದಲ್ಲಿ ಭಯ ಪಡದೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಂಗಳವಾರದಿಂದ ೆ.13ರವರೆಗೆ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜನರಲ್ಲಿ ರೋಗದ ಬಗ್ಗೆ ಜಾಗೃತಿ ಮೂಡಿಸಲು ಅಕಾರಿಗಳು ಮತ್ತು ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಪಂಚಾಯಿತಿ ಮಟ್ಟದಲ್ಲಿ ನಡೆಯುವ ಗ್ರಾಮ ಸಭೆ, ಶಾಲೆ, ಧಾರ್ಮಿಕ ಸ್ಥಳಗಳು ಮತ್ತು ನಗರದ ಕೊಳಚೆ ಪ್ರದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ವೈದ್ಯಾಕಾರಿಗಳು, ಅಕಾರಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಕುಷ್ಠರೋಗ ತಡೆಯುವ ಕುರಿತು ಪ್ರತಿಜ್ಞಾವಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ.ಸುರೇಂದ್ರಬಾಬು, ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಮಹ್ಮದ್ ಶಾಕೀರ್, ಜಿಲ್ಲಾ ಸರ್ವೇಣಾಕಾರಿ ಡಾ.ಗಣೇಶ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಕುಷ್ಠರೋಗ ನಿಯಂತ್ರಣಾಕಾರಿ ಡಾ.ಯಶೋಧಾ ಉಪಸ್ಥಿತರಿದ್ದರು.