ನಂಜನಗೂಡು ತಾಲೂಕಿನ ದೇಬೂರು ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯವನ್ನು ದರ್ಶನ್ ಧ್ರುವನಾರಾಯಣ ಉದ್ಘಾಟಿಸಿದರು. ಕಳಲೆ ಕೇಶವಮೂರ್ತಿ, ಕೆ.ಮಾರುತಿ ಸೇರಿದಂತೆ ಇನ್ನಿತರರು ಇದ್ದರು. 
ಜಿಲ್ಲೆ

ಗ್ರಂಥಾಲಯ ಸದುಪಯೋಗಪಡಿಸಿಕೊಳ್ಳಿ

ಶಿವಶಂಕರ್ ಎಂ. ಹೆಬ್ಬಳ್ಳ

ಶಾಸಕ ದರ್ಶನ್ ಧ್ರುವನಾರಾಯಣ ಮಾಹಿತಿ

ನಂಜನಗೂಡು : ಗ್ರಂಥಾಲಯ ಸದುಪಯೋಗಪಡಿಸಿಕೊಳ್ಳಿತಾಲೂಕಿನ ದೇಬೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಕಟ್ಟಡವನ್ನು ಶಾಸಕ ದರ್ಶನ್ ಧ್ರುವನಾರಾಯಣ ಶುಕ್ರವಾರ ಉದ್ಘಾಟಿಸಿದರು.

ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಗ್ರಂಥಾಲಯವನ್ನು ಸದುಪಯೋಗಪಡಿಸಿಕೊಂಡು ಜ್ಞಾನ ವೃದ್ಧಿಸಿಕೊಳ್ಳಬೇಕು. ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಲೈಬ್ರರಿಯನ್ನು ತೆರೆಯಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಲೈಬ್ರರಿ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಸಾಕಷ್ಟು ದೂರುಗಳು ಕೇಳಿಬಂದಿವೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್‌ರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಪರಶಿವಮೂರ್ತಿ, ಪಿಡಿಒ ಸೋಮಶೇಖರ್, ಸಿದ್ದರಾಜು, ಪಾಪಣ್ಣ, ಮಹೇಶ್, ಹೇಮಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು.