???????????????????????????????????? 
ಜಿಲ್ಲೆ

ಮತದಾರರು ಹೆಸರು ನೋಂದಣಿ ಮಾಡಿಕೊಳ್ಳಿ

ಪಾಂಡವಪುರ: ಹೊಸ ಮತದಾರರು ತಮ್ಮ ಹೆಸರನ್ನು ನೋಂದಣಿ ಮಾಡಿಸುವಂತೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ವೀಪ್ ಸಮಿತಿಯ ವಿದ್ಯಾರ್ಥಿಗಳು ಕಾಲೇಜಿನಿಂದ ಜಾಥಾ ಮೆರವಣಿಗೆ ಹೊರಟು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾರರ ಪಟ್ಟಿಯನ್ನು ತಿದ್ದುಪಡಿ ಕುರಿತು ಘೋಷಣೆ ಕೂಗಿದರು. ವಿವಿಧ ಘೋಷಣೆಗಳಿದ್ದ ಪ್ಲೇ ಕಾರ್ಡ್‌ಗಳನ್ನು ಪ್ರದರ್ಶಿಸಿದರು.

ಚುನಾವಣೆ ಇಲಾಖೆಯ ಆದೇಶದ ಮೇರೆಗೆ ಜನವರಿ 6ರಿಂದ 8ರ ವರೆಗೆ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕ್ಷೇತ್ರದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದು, ಹೆಸರು ಹಾಗೂ ದಾಖಲಾತಿ ತಿದ್ದುಪಡಿ, 18 ವರ್ಷ ಪೂರ್ಣಗೊಂಡಿರುವವರು ಯುವಕ-ಯುವತಿಯರು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾವಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಲಾಯಿತು.

ಕಾಲೇಜಿನ ಉಪನ್ಯಾಸಕರಾದ ಡಾ.ಬಿ.ಟಿ.ರಜನೀಕಾಂತ್, ಪುಟ್ಟರಾಮೇಗೌಡ ಇತರರಿದ್ದರು.