ಜಿಲ್ಲೆ

ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ವೇಳೆ ಕಳ್ಳತನ; ನೌಕರನ ಬಂಧನ

ಚಾಮರಾಜನಗರ: ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ಹಣ ಕದ್ದಿದ್ದ ನೌಕರನನ್ನ ಪೊಲೀಸರು ಬಂಧಿಸಿದ್ದಾರೆ.

ದೇವಸ್ಥಾನದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪನೀರ್ ಸೆಲ್ವಂ ಎಂಬಾತ 40 ಸಾವಿರ ರೂಪಾಯಿಗೆ ಕನ್ನ ಹಾಕಿದ್ದ. 500 ರೂ.ಗಳ 80 ನೋಟು ಜೇಬಿಗಿರಿಸಿದ್ದ ಸೆಲ್ವಂ ವರ್ತನೆಯಲ್ಲಿ ಬದಲಾವಣೆ ಕಂಡು ಬಂದಿದೆ.

ಈ ಬಗ್ಗೆ ಪರಿಶೀಲಿಸಿದ ಮಹದೇಶ್ವರ ಬೆಟ್ಟ ಪ್ರಾಧಿಕಾರ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.