ಜಿಲ್ಲೆ

ಉಕ್ಕಡಗಾತ್ರಿ ಅಜ್ಜಯ್ಯನ ಬೆಳ್ಳಿ ರಥೋತ್ಸವ

ಮಲೇಬೆನ್ನೂರು: ಸಮೀಪದ ಉಕ್ಕಡಗಾತ್ರಿ ಕರಿಬಸವೇಶ್ವರ ಸ್ವಾಮಿ ಬೆಳ್ಳಿ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.

ಮೂಲವಿಗ್ರಹಕ್ಕೆ ರುದ್ರಾಭೀಷೇಕ, ಲೋಕ ಕಲ್ಯಾಣಾರ್ಥವಾಗಿ ದೇವಾಲಯದಲ್ಲಿ ಗಣ, ರುದ್ರ ಹೋಮ ನೆರವೇರಿತು. ಶ್ರಾವಣ ಮಾಸದ ಮೂರನೇ ಸೋಮವಾರದ ವಿಶೇಷ ಪೂಜೆ ಸಲ್ಲಸಲಾಯಿತು. ದೇವಾಲಯವನ್ನು ವಿದ್ಯುತ್ ಅಲಂಕರಿಸಲಾಗಿತ್ತು.

ನಂದಿಗುಡಿ ವೃಷಭಪುರಿ ಪೀಠಾಧಿಪತಿ ಸಂಸ್ಥಾನದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಹಾಗೂ ದೇವಾಲಯ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪೊಲೀಸರು ಭದ್ರತೆ ಒದಗಿಸಿದ್ದರು. ಕರಿಬಸವೇಶ್ವರ ಗದ್ದುಗೆ ಟ್ರಸ್ಟ್‌ನಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.