ಕುಶಾಲನಗರ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಸಿ.ಕೆ. ಮಲ್ಲಪ್ಪ ಗುರುವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದರು.
ಈ ಸಂದರ್ಭ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಆಡಳಿತ ಮಂಡಳಿಯೊAದಿಗೆ ಸಂವಾದ ನಡೆಸಿದರು. ದಾಖಲಾತಿಗಳನ್ನು ಪರಿಶೀಲಿಸಿದ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಭೌತಿಕವಾಗಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈಯಕ್ತಿಕ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್ ಕುಮಾರ್, ಪಿಡಿಒ ಎಂ.ಆರ್. ಸುಮೇಶ್, ಆಡಳಿತ ಮಂಡಳಿ ಸದಸ್ಯರು ಇದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ನಾರಾಯಣ ಮೂರ್ತಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.