ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮ ದಿನ ಪ್ರಯಕ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕರ್ನಾಟಕ ಅಂಧರ ಕ್ಷೇಮಾಭ್ಯುದಯ ಸಂಸ್ಥೆಯ ಅಂಧ ಮಕ್ಕಳೊಂದಿಗೆ ಖರ್ಗೆ ಜನ್ಮದಿನವನ್ನು ಸೋಮವಾರ ಆಚರಿಸಲಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಸಂಸ್ಥೆ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, ದೇಶ ಮತ್ತು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ದಕ್ಷ ಆಡಳಿತ ನೀಡಿದ್ದಾರೆ. ತಳಮಟ್ಟದಿಂದ ಪಕ್ಷ ಸಂಘಟಿಸಿ ಇಂದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮುನ್ನಡೆಸುತ್ತಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥನೀಯವಾಗಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರ ಮುಂದೆ ಇಡುತ್ತಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ದೇಶದಾದ್ಯಂತ ಶಾಂತಿ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೇಂದ್ರ ಸರ್ಕಾರ ಮೇಲೆ ಒತ್ತಡ ತರಲು ಖರ್ಗೆ ಅವರಿಗೆ ಇನ್ನಷ್ಟು ಶಕ್ತಿ ಸಿಗಲಿವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ಮನೋಹರ್ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಕಾಶ್, ಎಂ.ಎಸ್.ಆನಂದ್ ಕುಮಾರ್, ಚಂದ್ರು, ಪುಟ್ಟರಾಜು, ಕುಶಾಲ್ ಹರುವೆಗೌಡ, ಪ್ರವೀಣ್‌ರಾವ್, ಓಬಳೇಶ್, ನವೀನ್ ಸಾಯಿ, ಉಮೇಶ್, ಚಿನ್ನಿಪ್ರಕಾಶ್, ನವೀನ್ ಸುಂಕದಕಟ್ಟೆ, ಮಾಧವ ಹನೂರು, ಸಂಜಯ್ ಮತ್ತಿತರರಿದ್ದರು.