ಜಿಲ್ಲೆ

ರಸ್ತೆಯಲ್ಲಿ ಜಲ್ಲಿಕಲ್ಲು ಗುಡಿಸಿ ವಿನೂತನ ಪ್ರತಿಭಟನೆ

reportermng

ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿ ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ಸ್ ಮತ್ತು ಸ್ಥಳೀಯ ಆಟೋ ಚಾಲಕರು ರಸ್ತೆಯಲ್ಲಿ ಜಲ್ಲಿಕಲ್ಲು ಗುಡಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.


ಮಹಾನಗರ ಪಾಲಿಕೆಗೆ ಹಲವು ಬಾರಿ ಇಲ್ಲಿನ ಸಮಸ್ಯೆಯ ಬಗ್ಗೆ ದೂರು ನೀಡಲಾಗಿದೆ. ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಅದಕ್ಕಾಗಿ ಪಾಲಿಕೆಯ ಗಮನ ಸೆಳೆಯುವ ಉದ್ದೇಶದಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದು ಜೆರಾಲ್ಡ್ ಟವರ್ಸ್ ಹೇಳಿದರು.