ಜಿಲ್ಲೆ

ಮಲ್ಪೆಯಲ್ಲಿ ಅಣಕು ಕಾರ್ಯಾಚರಣೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್​ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಮಂಗಳವಾರ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಅಗ್ನಿಶಾಮಕ ವಾಹನವು ಸೈರನ್​ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್​ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.

ಕರಾವಳಿ ಕಾವಲು ಪಡೆಯ ಬೋಟ್​ನಲ್ಲಿ ಸಿಬ್ಬಂದಿ ಶಸ್ತ್ರ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯವೈಖರಿ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್​ ನಿರೀಕ್ಷಕರಾದ ಪ್ರಮೋದ್​, ಸೀತಾರಾಮ್​, ಪಿಎಸ್​ಐ ಫೆಮಿನಾ ಮೊದಲಾದವರು ಹಾಜರಿದ್ದರು.

ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಈ ಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಲಾಗಿದೆ. 3 ಬೋಟ್​ಗಳು ಒಟ್ಟಿಗೆ ಮೀನುಗಾರಿಕೆಗೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.  ಮಿಥುನ್​, ಎಸ್​ಪಿ, ಕರಾವಳಿ ಕಾವಲು g8ಪಡೆ.