ಜಿಲ್ಲೆ

ಮಮತಾ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ

malli

ಬೆಂಗಳೂರು: ಪಾಲಿಕೆಯಲ್ಲಿ ಖಾಲಿ ಉಳಿದಿದ್ದ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಮತಾ ವಾಸುದೇವ್ ಆಯ್ಕೆಯಾಗಿದ್ದಾರೆ.

ಮೇಯರ್ ಅಧ್ಯಕ್ಷತೆಯಲ್ಲಿ ಬುಧವಾರ ಅಧ್ಯಕ್ಷರ ಆಯ್ಕೆ ಸಭೆ ನಡೆಯಿತು. ಸಮಿತಿಯ 11 ಸದಸ್ಯರು ಉಪಸ್ಥಿತರಿದ್ದರು. ಎಲ್ಲ ಸದಸ್ಯರ ಒಪ್ಪಿಗೆ ಮೇರೆಗೆ ಜೆ.ಪಿ. ಉದ್ಯಾನವನ ವಾರ್ಡ್​ನ ಮಮತಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಲೆಕ್ಕಪತ್ರ ಮತ್ತು ತೋಟಗಾರಿಕೆ ಸ್ಥಾಯಿ ಸಮಿತಿಗಳಲ್ಲಿ ಖಾಲಿಯಿದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಮಮತಾ ಆಯ್ಕೆಯಾಗಿದ್ದರು.

ಜ.23 ರಂದು 10 ಸ್ಥಾಯಿ ಸಮಿತಿ ಮತ್ತು ಜ.27 ರಂದು ತೋಟಗಾರಿಕೆ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿತ್ತು. ಈಗ ಎಲ್ಲ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣವಾಗಿದೆ.