ಜಿಲ್ಲೆ

ಅತ್ಯಾಚಾರಕ್ಕೆ ಯತ್ನಿಸಿದವನ ಸೆರೆ

ರೇಷ್ಮೆ ನಗರ ಡೆಸ್ಕ್

ಕನಕಪುರ: ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ನಗರದ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ಸೋಮೇದ್ಯಾಪನಹಳ್ಳಿಯ ಯುವಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಯುವಕನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.