ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದ ನ್ಯಾಬೆಲೆ ಅಂಗಡಿಯಲ್ಲಿ ಪಡಿತರ ಕಾರ್ಡ್‌ಗಳಿಗೆ ವಿತರಿಸಿದ್ದ ರಾಗಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಿದ್ದ ರಾಗಿಯನ್ನು ಗ್ರಾಮದ ಪ್ರಕಾಶ್ ಅವರು ಕಡಿಮೆ ಬೆಲೆಗೆ ಖರೀದಿಸಿ ಮಿಲ್ ಮಾಡಿಸಿ ತಮ್ಮ ಅಂಗಡಿಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಪಟ್ಟಣ ಪೊಲೀಸರು ದಾಳಿ ನಡೆಸಿ 1.5 ಕ್ವಿಂಟಾಲ್ ರಾಗಿಯನ್ನು ವಶಕ್ಕೆ ಪಡೆದರು. ಆಹಾರ ಇಲಾಖೆಯ ಅರವಿಂದ್ ನೀಡಿದ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿದ್ದಾರೆ.