ಜಿಲ್ಲೆ

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವನ ಸೆರೆ

ಮೈಸೂರು: ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ನಗರ ನಜರ್‌ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಯರಗನಹಳ್ಳಿ ಮುಖ್ಯರಸ್ತೆ, ಎಸ್‌ಆರ್‌ಟಿ ಮಾಳದ ಎದುರಿನ ಗ್ಯಾಸ್ ಸ್ಟೌ ರಿಪೇರಿ ಶಾಪ್‌ನಲ್ಲಿ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಬಗ್ಗೆ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಲು ಬಳಸುತ್ತಿದ್ದ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.