ನಕ್ಷತ್ರ ಆಮೆ 
ಜಿಲ್ಲೆ

ನಕ್ಷತ್ರ ಆಮೆ ಸಾಗಿಸುತ್ತಿದ್ದವನ ಬಂಧನ

ಅಭಿನಯ್ ಎಚ್.ಎಂ

ಕೊಳ್ಳೇಗಾಲ: ನಕ್ಷತ್ರ ಆಮೆ ಸಾಗಿಸುತ್ತಿದ್ದವನನ್ನು ತಾಲೂಕಿನ ಮಧುವನಹಳ್ಳಿ ಬಳಿಯಿರುವ ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ಸಿಐಡಿ ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಮೂಲದ ಪುದೂರು ಗ್ರಾಮದ ನಾಗರಾಜು(35) ಬಂಧಿತ ಆರೋಪಿ.

ಈತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಮಾರಾಟ ಮಾಡುವ ಸಲುವಾಗಿ ಜೀವಂತ ನಕ್ಷತ್ರ ಆಮೆಯನ್ನು ಮಧುವನಹಳ್ಳಿ ಬೈಪಾಸ್ ರಸ್ತೆಯಲ್ಲಿ ಸಾಗಿಸುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಂಚಾರಿ ದಳದ ಪೊಲೀಸ್ ಇನ್‌ಸ್ಪೆಕ್ಟರ್ ವಿಜಯರಾಜ್ ನೇತೃತ್ವದ ತಂಡ ಕಾಯಾ ಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.

ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.