ಜಿಲ್ಲೆ

ಅಕ್ರಮವಾಗಿ ಚಿನ್ನ ಸಾಗಣೆ ಭಟ್ಕಳದ ವ್ಯಕ್ತಿ ಮಂಗಳೂರಲ್ಲಿ ಬಂಧನ

Uttara Kannada - Subash Hegde

ಭಟ್ಕಳ: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನನ್ನು ವಶಕ್ಕೆ ಪಡೆದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಚಿನ್ನ ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನೊಬ್ಬನಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಎರಡು ಪದರದ ಬ್ರೌನ್ ಪೇಪರ್ ಹಾಳೆಗಳ ನಡುವೆ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಟ್ರಾಲಿ ಬ್ಯಾಗ್‌ನಲ್ಲಿ ತರುತ್ತಿದ್ದ ಎನ್ನಲಾಗಿದೆ. ಬ್ಯಾಗ್ ಸ್ಕ್ಯಾನಿಂಗ್ ಮಾಡಿದಾಗ ಪ್ರಕರಣ ಬಯಲಿಗೆ ಬಂದಿದ್ದು, ಬ್ಯಾಗ್ ತೆರೆದು ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಹೆಸರನ್ನು ಕಸ್ಟಮ್ಸ್‌ ಅಧಿಕಾರಿಗಳು ಬಹಿರಂಗ ಮಾಡಿಲ್ಲ.