ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಅಶುತೋಷ್ ಭಿಷ್ಮೋಯಿ ಎಂಬಾತನೇ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣದ ಮೂಲಕ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಯಾದ ಚಿತ್ರ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಬಗ್ಗೆ ಸಾಕಷ್ಟು ಜನರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.