ಮೈಸೂರು: ಮುಂಬೈ ಪೊಲೀಸರ ಹೆಸರಿನಲ್ಲಿ ಅನ್‌ಲೈನ್‌ನಲ್ಲಿ ಹೆದರಿಸಿದ ಆಗಂತಕರು ನಗರದ ದತ್ತ ನಗರದ ವ್ಯಕ್ತಿಗೆ 34 ಲಕ್ಷ ರೂ. ವಂಚಿಸಿದ್ದಾರೆ.
ಮೊಬೈಲ್‌ಗೆ ಕರೆ ಮಾಡಿದ ಆರೋಪಿಗಳು, ನೀವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣವನ್ನು ನಾವು ಹೇಳಿದ ಖಾತೆಗಳಿಗೆ ಹಾಕಬೇಕು, ಹಣ ಮತ್ತೆ ಜಮೆಯಾಗಲಿದೆ. ಇಲ್ಲದಿದ್ದರೆ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೆದರಿಸಿ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸೆನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಅನ್‌ಲೈನ್‌ನಲ್ಲಿ ಮಹಿಳೆಗೆ ವಂಚನೆ:
ರಾಜೀವ್‌ನಗರದ 40 ವರ್ಷದ ಮಹಿಳೆಯೊಬ್ಬರು ಇನ್ಸ್ ಸ್ಟಾಗ್ರಾಂನಲ್ಲಿ ಬಂದ ಮೆಸೇಜ್‌ನಿಂದ 30 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಬರಲಿದೆ ಎಂದು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ಮಹಿಳೆ, ಹಂತ, ಹಂತವಾಗಿ ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು, ಹಣ ವಾಪಸ್ ಬಾರದಿದ್ದರಿಂದ ಸೆನ್ ಪೊಲೀಸ್ ಠಾಣೆ ದೂರು ನೀಡಿದ್ದಾರೆ.