ಜಿಲ್ಲೆ

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಲ್ಲಪ್ಪ ನಾಗಪ್ಪ ಹಡಪದ (64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಮಾನಸಿಕ ಅಸ್ವಸ್ಥನಾಗಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.