ಚಿಕ್ಕಬಳ್ಳಾಪುರ:ಚಿಂತಾಮಣಿ ತಾಲೂಕಿನ ಮಾಸನಹಳ್ಳಿಯ ಗ್ರಾಮದ ಹೊರವಲಯದಲ್ಲಿ ಈಶ್ವರಪ್ಪ (38) ಎಂಬಾತ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿಗೆ ಆತನ ಪತ್ನಿಯ ಅಕ್ರಮ ಸಂಬಂಧವೇ ಕಾರಣ ಎಂದು ಮೃತನ ಅಣ್ಣ ನಾರಾಯಣಸ್ವಾಮಿ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.
ಈಶ್ವರಪ್ಪ ಪತ್ನಿ ಬೇರೆ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಗ್ರಾಮದ ಮುಖಂಡರು ಪಂಚಾಯಿತಿ ನಡೆಸಿ ಇಬ್ಬರಿಗೂ ಬುದ್ಧಿ ಹೇಳಿದ್ದರು. ಆದರೂ, ನಡತೆ ಸರಿಯಾಗಿಲ್ಲವೆಂದು ಬೇಸರಗೊಂಡ ಈಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೃತನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮರಣೋತ್ತರ ಪರೀೆ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.